ADVERTISEMENT

ಅಧಿಕಾರಕ್ಕೆ ಬಂದರೆ ಬೈಕ್‌ನಲ್ಲಿ ಟ್ರಿಪಲ್ ರೈಡ್‌ಗೆ ಅವಕಾಶ: ಎಸ್‌ಬಿಎಸ್‌ಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಫೆಬ್ರುವರಿ 2022, 11:34 IST
Last Updated 9 ಫೆಬ್ರುವರಿ 2022, 11:34 IST
ಎಸ್‌ಬಿಎಸ್‌ಪಿ ಪಕ್ಷದ ಮುಖ್ಯಸ್ಥ, ಓಂ ಪ್ರಕಾಶ್ ರಾಜ್‌ಭರ್
ಎಸ್‌ಬಿಎಸ್‌ಪಿ ಪಕ್ಷದ ಮುಖ್ಯಸ್ಥ, ಓಂ ಪ್ರಕಾಶ್ ರಾಜ್‌ಭರ್    

ಲಖನೌ: ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಜನರಿಗೆ ಬೈಕ್‌ನಲ್ಲಿ ಮೂವರನ್ನು ಕೂರಿಸಿಕೊಂಡು ಹೋಗಲು ಅವಕಾಶ ನೀಡುತ್ತೇವೆ ಎಂದು ಸಮಾಜವಾದಿ ಪಕ್ಷದ ಮಿತ್ರಪಕ್ಷ ಸುಹೇಲ್‌ದೇವ್ ಭಾರತೀಯ ಸಮಾಜ್ ಪಾರ್ಟಿ (ಎಸ್‌ಬಿಎಸ್‌ಪಿ) ಹೇಳಿದೆ.

ಈ ಕುರಿತು ಹೇಳಿಕೆ ನೀಡಿರುವ ಎಸ್‌ಬಿಎಸ್‌ಪಿ ಪಕ್ಷದ ಮುಖ್ಯಸ್ಥ, ಓಂ ಪ್ರಕಾಶ್ ರಾಜ್‌ಭರ್, ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ಜನರಿಗೆ ಬೈಕ್‌ನಲ್ಲಿ ಮೂವರು ಸಂಚರಿಸಲು ಅವಕಾಶ ಮತ್ತು ದಂಡ ವಿಧಿಸುವುದಿಲ್ಲ ಎಂದು ಹೇಳಿದೆ.

ಅಲ್ಲದೆ, ಆಟೊರಿಕ್ಷಾ ಮತ್ತು ಟೆಂಪೊದಲ್ಲಿ ಕೂಡ ನಿಗದಿತ ಮಿತಿಗಿಂತ ಹೆಚ್ಚಿನ ಜನರನ್ನು ಕರೆದುಕೊಂಡು ಹೋಗಬಹುದು, ಅದಕ್ಕೆ ದಂಡ ವಿಧಿಸುವುದಿಲ್ಲ ಎಂದು ರಾಜ್‌ಭರ್ ಹೇಳಿದ್ದಾರೆ.

ADVERTISEMENT

ಉತ್ತರ ಪ್ರದೇಶದ ಮಾಜಿ ಸಚಿವರೂ ಆಗಿರುವ ರಾಜ್‌ಭರ್, ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.