ADVERTISEMENT

ಮಾಜಿ ಯೋಧ ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 1 ಮೇ 2019, 11:21 IST
Last Updated 1 ಮೇ 2019, 11:21 IST
   

ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರವನ್ನು ಜಿಲ್ಲಾ ಚುನಾವಣಾ ಅಧಿಕಾರಿ ತಿರಸ್ಕರಿಸಿದ್ದಾರೆ.

ಮೋದಿ ವಿರುದ್ಧ ಸ್ಪರ್ಧಿಸಲು ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದ್ದರು.

ತೇಜ್ ಬಹದ್ದೂರ್ ಅವರ ನಾಮಪತ್ರ ತಿರಸ್ಕೃತವಾದ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷ ಶಾಲಿನಿ ಯಾದವ್ ಅವರನ್ನು ಕಣಕ್ಕಿಳಿಸಿದೆ. ಶಾಲಿನಿ ಅವರು ಇಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಸಿದ್ದರು.

ADVERTISEMENT

ನಾಮಪತ್ರ ತಿರಸ್ಕರಿಸಿದ್ದಕ್ಕಾಗಿ ತೇಜ್ ಬಹದ್ದೂರ್ ಸುಪ್ರೀಂಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ.

ನನ್ನ ನಾಮಪತ್ರವನ್ನು ವಿನಾಕಾರಣ ತಿರಸ್ಕರಿಸಲಾಗಿದೆ.ನಿನ್ನೆ 6.15ಕ್ಕೆ ದಾಖಲೆಗಳನ್ನು ಸಲ್ಲಿಸಲು ಹೇಳಲಾಗಿತ್ತು. ದಾಖಲೆಗಳನ್ನು ಸಲ್ಲಿಸಿದರೂ ನನ್ನ ನಾಮಪತ್ರವನ್ನು ತಿರಸ್ಕರಿಸಲಾಗಿದೆ.ಇದನ್ನು ಪ್ರಶ್ನಿಸಿ ನಾನು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಲಿದ್ದೇನೆ ಎಂದು ತೇಜ್ ಬಹದ್ದೂರ್ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.