ADVERTISEMENT

ಕೋವಿಡ್‌ನಿಂದ ಬಳಲುತ್ತಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಆರೋಗ್ಯ ಗಂಭೀರ

ಏಜೆನ್ಸೀಸ್
Published 29 ಮೇ 2021, 8:50 IST
Last Updated 29 ಮೇ 2021, 8:50 IST
   

ಲಖನೌ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೇದಾಂತ ಆಸ್ಪತ್ರೆ ಶನಿವಾರ ಮಾಹಿತಿ ನೀಡಿದೆ.

ಈ ವಿಚಾರವಾಗಿ ಪ್ರಕಟಣೆ ಹೊರಡಿಸಿರುವ ಲಖನೌನ ಮೇದಾಂತ ಆಸ್ಪತ್ರೆಯು, 'ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಶ್ವಾಸಕೋಶದಲ್ಲಿ ಸೋಂಕಿನ ಪ್ರಮಾಣ ಅಧಿಕವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ,' ಎಂದು ತಿಳಿಸಿದೆ.

ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿದ್ದ ಅಜಂ ಖಾನ್‌ ಅವರಿಗೆ ಮೇ 1ರಂದು ಕೋವಿಡ್‌ ಇರುವುದು ದೃಢಪಟ್ಟಿತ್ತು. ಲಖನೌನಲ್ಲಿರುವ ಮೇದಾಂತ ಆಸ್ಪತ್ರೆಗೆ ಮೇ 9ರಂದು ಅವರನ್ನು ದಾಖಲಿಸಲಾಗಿತ್ತು.

ADVERTISEMENT

ಭೂಕಬಳಿಕೆ, ಭೂ ಒತ್ತುವರಿ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಅಜಂ ಖಾನ್, ಅವರ ಪತ್ನಿ ಮತ್ತು ಪುತ್ರನನ್ನು ಕಳೆದ ವರ್ಷದ ಫೆಬ್ರವರಿಯಲ್ಲಿ ಜೈಲಿನಲ್ಲಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.