ADVERTISEMENT

ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಮತ್ತೆ ಆಸ್ಪತ್ರೆಗೆ ದಾಖಲು

ಏಜೆನ್ಸೀಸ್
Published 11 ಮೇ 2020, 7:00 IST
Last Updated 11 ಮೇ 2020, 7:00 IST
ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ)
ಮುಲಾಯಂ ಸಿಂಗ್ ಯಾದವ್ (ಸಂಗ್ರಹ ಚಿತ್ರ)   

ಲಖನೌ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರು ಇಲ್ಲಿನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಯಿಂದ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷ ವಯಸ್ಸಿನ ಮುಲಾಯಂ ಶನಿವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಭಾನುವಾರ ರಾತ್ರಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.

ಸಾಮಾನ್ಯ ಆರೋಗ್ಯ ತಪಾಸಣೆಗೆಂದು ಮುಲಾಯಂ ಅವರನ್ನು ಬುಧವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆ ಸಂದರ್ಭ ಅವರನ್ನು ಪರೀಕ್ಷಿಸಿದ ವೈದ್ಯರು ಆರೋಗ್ಯದಲ್ಲಿ ಸಮಸ್ಯೆ ಇರುವುದಾಗಿ ತಿಳಿಸಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದೂ ಚೌಧರಿ ತಿಳಿಸಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.