ADVERTISEMENT

ಉತ್ತರ ಪ್ರದೇಶದಲ್ಲಿ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿ: ಸಮಾಜವಾದಿ ಪಾರ್ಟಿ

ಪಿಟಿಐ
Published 18 ಜನವರಿ 2022, 1:27 IST
Last Updated 18 ಜನವರಿ 2022, 1:27 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಕೋಲ್ಕತ: ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಉತ್ತರ ಪ್ರದೇಶದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂದು ಸಮಾಜವಾದಿ ಪಕ್ಷದ ಪರ ಪ್ರಚಾರ ಮಾಡಬೇಕು ಎಂದು ಎಸ್‌ಪಿ ಉಪಾಧ್ಯಕ್ಷರಾದ ಕಿರಣ್ಮಯಿ ನಂದಾ ಹೇಳಿದ್ದಾರೆ.

ಮಂಗಳವಾರ ಮಮತಾ ಬ್ಯಾನರ್ಜಿ ಅವರನ್ನು ಕಿರಣ್ಮಯಿ ಅವರು ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣೆ ಕುರಿತು ಚರ್ಚೆಯ ಜತೆಗೆ ಪ್ರಚಾರ ಕಾರ್ಯಕ್ಕೆ ಉತ್ತರ ಪ್ರದೇಶಕ್ಕೆ ಆಗಮಿಸುವಂತೆ ಅವರು ಕೋರಿಕೆ ಸಲ್ಲಿಸಲಿದ್ದಾರೆ.

ಪಶ್ವಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಅತ್ಯಂತ ಉತ್ಸಾಹದಿಂದ ಹೋರಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶಕ್ಕೂ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಬರಬೇಕು ಎಂದು ನಮ್ಮ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆಶಿಸಿದ್ದಾರೆ ಎಂದುಕಿರಣ್ಮಯಿ ತಿಳಿಸಿದ್ದಾರೆ.

ADVERTISEMENT

ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಜತೆ ಅಖಿಲೇಶ್ ಯಾದವ್ ಅತ್ಯಂತ ನಿಕಟ ಸಂಪರ್ಕ ಹೊಂದಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಫೆಬ್ರುವರಿ 10ಕ್ಕೆ ಆರಂಭವಾಗಿ, ಮಾರ್ಚ್ 7ಕ್ಕೆ ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.