ADVERTISEMENT

ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಬೆಂಬಲಿಸಲು ಎಸ್‌ಪಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 7:32 IST
Last Updated 22 ಸೆಪ್ಟೆಂಬರ್ 2020, 7:32 IST
ಆರ್‌ಜೆಡಿಯ ತೇಜಸ್ವಿ ಯಾದವ್‌ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌
ಆರ್‌ಜೆಡಿಯ ತೇಜಸ್ವಿ ಯಾದವ್‌ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌    

ನವದೆಹಲಿ: ಮುಲಾಯಂ ಸಿಂಗ್‌ ನೇತೃತ್ವದ ಸಮಾಜವಾದಿ ಪಕ್ಷವು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದು, ಲಾಲು ಪ್ರಸಾದ್‌ ಯಾದವ್‌ ಅವರ ರಾಷ್ಟ್ರೀಯ ಜನತಾದಳವನ್ನು (ಆರ್‌ಜೆಡಿ) ಬೆಂಬಲಿಸಲು ನಿರ್ಧರಿಸಿದೆ.

ಈ ಕುರಿತು ಸೋಮವಾರ ಟ್ವೀಟ್‌ ಮಾಡಿರುವ ಸಮಾಜವಾದಿ ಪಕ್ಷ, 'ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಯಾವುದೇ ಮೈತ್ರಿ ಇಲ್ಲದೇ, ರಾಷ್ಟ್ರೀಯ ಜನತಾದಳದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ನಿರ್ಧರಿಸಿದೆ,’ ಎಂದು ತಿಳಿಸಿದೆ.

2015 ರಲ್ಲಿ ಮಹಾಘಟಬಂಧನದಲ್ಲಿದ್ದ ಎಸ್‌ಪಿಗೆ 243 ಕ್ಷೇತ್ರಗಳ ಪೈಕಿ ಕೇವಲ ಐದು ಸೀಟುಗಳನ್ನು ಮಾತ್ರ ಬಿಟ್ಟುಕೊಡಲಾಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಎಸ್‌ಪಿ ಮೈತ್ರಿಯಿಂದ ಹೊರ ಬಂದು ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧೆ ಮಾಡಿತು. ಆದರೆ, ಎರಡೂ ಪಕ್ಷಗಳಿಗೂ ಯಾವುದೇ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

ADVERTISEMENT

ಇದಕ್ಕೂ ಮುನ್ನ 2010ರ ಬಿಹಾರ ಚುನಾವಣೆಗಳಲ್ಲಿ ಎಸ್‌ಪಿ ಸಾಧನೆ ಕೂಡ ಕಳಪೆಯಾಗಿತ್ತು. ಒಟ್ಟು 243 ಕ್ಷೇತ್ರಗಳ ಪೈಕಿ 146 ಸ್ಥಾನಗಳಿಗೆ ಸ್ಪರ್ಧಿಸಿದ್ದ ಎಸ್‌ಪಿ ಯಾವುದೇ ಸ್ಥಾನ ಗೆಲ್ಲುವಲ್ಲಿ ವಿಫಲವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.