ಸಂಭಲ್ : ‘ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ಸರ್ಕಾರದ (ಇಂಡಿಯನ್ ಸ್ಟೇಟ್) ವಿರುದ್ಧ ಹೋರಾಡುತ್ತಿದ್ದೇವೆ’ ಎಂಬ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸ್ಥಳೀಯ ನ್ಯಾಯಾಲಯವೊಂದು ಬುಧವಾರ ನೋಟಿಸ್ ಜಾರಿ ಮಾಡಿದೆ.
ಹಿಂದೂ ಶಕ್ತಿ ದಳದ ರಾಷ್ಟ್ರೀಯ ಅಧ್ಯಕ್ಷ ಸಿಮ್ರಾನ್ ಗುಪ್ತಾ ಅವರು ಸಲ್ಲಿಸಿದ ದೂರಿನ ಮೇರೆಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಆರತಿ ಫೌಜ್ದಾರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.
ನ್ಯಾಯಾಲಯವು ಈ ಹಿಂದೆ ರಾಹುಲ್ ಗಾಂಧಿ ಅವರನ್ನು ಏಪ್ರಿಲ್ 4ರಂದು ಹಾಜರಾಗುವಂತೆ ಹೇಳಿತ್ತು. ಬಳಿಕ ಅವರು ಪ್ರತಿಕ್ರಿಯೆ ನೀಡಲು ಮೇ 7ರವರೆಗೆ ದಿನಾಂಕವನ್ನು ವಿಸ್ತರಿಸಿತ್ತು. ಆದರೆ, ಬುಧವಾರ ರಾಹುಲ್ ಪರ ವಕೀಲರು ಗೈರುಹಾಜರಾದ ಕಾರಣ, ಕಿರಿಯ ವಕೀಲರು ಹೊಸ ದಿನಾಂಕವನ್ನು ಕೋರಿದ್ದಾರೆ. ಅದನ್ನು ಸ್ವೀಕರಿಸಿದ ನ್ಯಾಯಾಲಯವು ಜೂನ್ 16ರಂದು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.