ಸುಪ್ರೀಂ ಕೋರ್ಟ್
ನವದೆಹಲಿ: ಸಂಭಲ್‌ನ ಪುರಾತನ ಬಾವಿಯ ಪುನಶ್ಚೇತನಕ್ಕೆ ಶಾಹಿ ಜಾಮಾ ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಉತ್ತರ ಪ್ರದೇಶವು ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಬಾವಿಯನ್ನು ಸ್ಥಳೀಯರು ‘ಧರಣಿ ವರಾಹ ಕೂಪ’ ಎಂದು ಕರೆಯುತ್ತಾರೆ. ಬಾವಿಯು ವಿವಾದಿತ ಸ್ಥಳದ ಹೊರಗೆ, ಸಾರ್ವಜನಿಕ ಪ್ರದೇಶದಲ್ಲಿದ್ದರೂ ಸಮಿತಿಯು ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದೆ. ಸಂಭಲ್ ಜಿಲ್ಲೆಯಲ್ಲಿರುವ ಸಾಂಸ್ಕೃತಿಕವಾಗಿ ಪ್ರಾಮುಖ್ಯತೆ ಪಡೆದಿರುವ ಸ್ಥಳಗಳು ಮತ್ತು 19 ಪ್ರಮುಖ ಬಾವಿಗಳ ಪುನಶ್ಚೇತನಕ್ಕೆ ಜಿಲ್ಲಾಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದೆ. ಪುನಶ್ಚೇತನಕ್ಕೆ ಅಡ್ಡಿಪಡಿಸುವುದು ಅಕ್ರಮ ಮಾತ್ರ ಅಲ್ಲ, ಪ್ರದೇಶದ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ಕೆಡಕು ಉಂಟುಮಾಡುವ ಕೆಲಸವಾಗಿದೆ ಎಂದು ಸರ್ಕಾರ ವರದಿಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.