ADVERTISEMENT

Sambhal Mosque Row | ಸಮೀಕ್ಷೆಗೆ ತಡೆ ಇಲ್ಲ: ಅಲಹಾಬಾದ್‌ ಹೈಕೋರ್ಟ್‌

ಪಿಟಿಐ
Published 19 ಮೇ 2025, 14:06 IST
Last Updated 19 ಮೇ 2025, 14:06 IST
ಅಲಹಾಬಾದ್‌ ಹೈಕೋರ್ಟ್‌
ಅಲಹಾಬಾದ್‌ ಹೈಕೋರ್ಟ್‌   

ಪ್ರಯಾಗ್‌ರಾಜ್‌ : ಶಾಹಿ ಜಾಮಾ ಮಸೀದಿಯಲ್ಲಿ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಸಮೀಕ್ಷೆ ನಡೆಸಲು ಅನುಮತಿ ನೀಡಿದ ಸಂಭಲ್‌ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ.

‘ಸಮೀಕ್ಷೆ ಮೇಲ್ವಿಚಾರಣೆಗಾಗಿ ಕೋರ್ಟ್‌ ಕಮಿಷನರ್‌ ನೇಮಿಸಿದ್ದು ಮತ್ತು ಸಮೀಕ್ಷೆ ನಡೆಸಲು ಅನುಮತಿ ನೀಡಿದ್ದು ಸರಿಯಾಗಿಯೇ ಇದೆ’ ಎಂದೂ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರು ಈ ಅರ್ಜಿಯ ಕುರಿತ ತೀರ್ಪನ್ನು ಕಾಯ್ದಿರಿಸಿದ್ದರು.

ದೇವಸ್ಥಾನವನ್ನು ಕೆಡವಿ ಮಸೀದಿಯನ್ನು ಕಟ್ಟಲಾಗಿದೆ ಎಂದು ಆರೋಪಿಸಿ ಹರಿ ಶಂಕರ್‌ ಜೈನ್‌ ಸೇರಿ ಇತರ ಏಳು ಮಂದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಬಳಿಕ ಸಂಭಲ್‌ನಲ್ಲಿ ಕೋಮು ಸಂಘರ್ಷ ನಡೆದು ದೊಡ್ಡ ವಿವಾದ ಸೃಷ್ಟಿಯಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.