ಬಂಧನ
(ಸಾಂದರ್ಭಿಕ ಚಿತ್ರ)
ಸಂಭಲ್: ಕಳೆದ ವರ್ಷ ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಖಗ್ಗು ಸರಾಯ್ ಪ್ರದೇಶದ ನಿವಾಸಿ ಅರ್ಷದ್ ಬಂಧಿತ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ತಿಳಿಸಿದ್ದಾರೆ.
‘ಘಟನೆಯ ವಿಡಿಯೊ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಗುರುತಿಸಲಾಗಿದ್ದು, ಶನಿವಾರ ಬಂಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.
ಸಂಭಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 74 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಶೀಘ್ರದಲ್ಲೇ ಹೆಚ್ಚು ಮಂದಿಯ ಬಂಧನದ ನಿರೀಕ್ಷೆ ಇದೆ.
ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆ ಹಚ್ಚುತ್ತಿದ್ದಾರೆ.
ಸ್ಥಳದಲ್ಲಿದ್ದ ದೇಗುಲವನ್ನು ಕೆಡವಿ ಮೊಘಲ್ ದೊರೆ 1526 ರಲ್ಲಿ ಮಸೀದಿ ನಿರ್ಮಿಸಿದ್ದ ಎಂದು ಪ್ರತಿಪಾದಿಸಿದ್ದ ಹಿಂದೂ ಸಂಘಟನೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ಮಸೀದಿಯ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು.
ಕಳೆದ ವರ್ಷ ನವೆಂಬರ್ 24 ರಂದು ಎರಡನೇ ಸುತ್ತಿನ ಸಮೀಕ್ಷೆಯ ಸಂದರ್ಭದಲ್ಲಿ, ಪ್ರತಿಭಟನಾನಿರತ ಸ್ಥಳೀಯರು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಘರ್ಷಣೆ, ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.