ADVERTISEMENT

ಸಂಭಲ್ ಹಿಂಸಾಚಾರ ಪೂರ್ವಯೋಜಿತ ಕೃತ್ಯ: ಲೋಕಸಭೆಯಲ್ಲಿ ಅಖಿಲೇಶ್ ಯಾದವ್

ಪಿಟಿಐ
Published 3 ಡಿಸೆಂಬರ್ 2024, 11:35 IST
Last Updated 3 ಡಿಸೆಂಬರ್ 2024, 11:35 IST
<div class="paragraphs"><p>ಅಖಿಲೇಶ್ ಯಾದವ್</p></div>

ಅಖಿಲೇಶ್ ಯಾದವ್

   

ಪಿಟಿಐ

ನವದೆಹಲಿ: ಉತ್ತರ ಪ್ರದೇಶದ ಸಂಭಲ್‌ನಲ್ಲಿ ನಡೆದ ಹಿಂಸಾಚಾರ ‘ಪೂರ್ವಯೋಜಿತ ಕೃತ್ಯ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ADVERTISEMENT

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಚಂದೌಸಿಯಲ್ಲಿನ ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ನ್ಯಾಯಾಲಯ ಆದೇಶಿಸಿರುವುದು ನಮ್ಮಲ್ಲಿನ ‘ಗಂಗಾ– ಜಮುನಿ’ ಭ್ರಾತೃತ್ವಕ್ಕೆ ಧಕ್ಕೆ ಉಂಟುಮಾಡಬಹುದು ಎಂದಿದ್ದಾರೆ.

‘ಅಲ್ಲಿ ನಡೆದ ಘಟನೆ ಪೂರ್ವಯೋಜಿತ ಕೃತ್ಯ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ದೀರ್ಘ ಕಾಲದಿಂದ ಭ್ರಾತೃತ್ವಕ್ಕೆ ಹೆಸರು ಪಡೆದಿರುವ ಸ್ಥಳದಲ್ಲಿ ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಈ ಪಿತೂರಿ ಮಾಡಿವೆ’ ಎಂದು ದೂರಿದ್ದಾರೆ.

ಘಟನೆ ಸಂಬಂಧ ಸಂಭಲ್‌ ಆಡಳಿತವು ತರಾತುರಿಯಲ್ಲಿ ವರ್ತಿಸಿದೆ ಎಂದು ಆರೋಪಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

‘ಈ ಸರ್ಕಾರವು ಸಂವಿಧಾನವನ್ನು ಗೌರವಿಸುತ್ತಿಲ್ಲ’ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.