ನವದೆಹಲಿ: ಜೈನರ ಪವಿತ್ರ ಸ್ಥಳ ಸಮ್ಮದ್ ಶಿಖರ್‌ಜಿಯನ್ನು ಪ್ರವಾಸಿ ಸ್ಥಳವಾಗಿ ಪರಿವರ್ತಿಸದಿರಲು ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಗಳು ತೀರ್ಮಾನಿಸಿವೆ ಎಂದು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಇಕ್ಬಾಲ್ ಸಿಂಗ್ ಲಾಲ್‌ಪುರ ಅವರು ಬುಧವಾರ ತಿಳಿಸಿದರು.
ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ ಎಂದು ತಿಳಿಸಿದರು.
ಸಮ್ಮದ್ ಶಿಖರ್‌ಜಿ ಎಂಬುದು ಜೈನರ ಪವಿತ್ರ ಸ್ಥಳ. ಇದನ್ನು ಪ್ರವಾಸಿ ತಾಣವಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.
ಕೇಂದ್ರ ಸರ್ಕಾರ ಜ.5ರಂದು ಇಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆ ನಡೆಸದಂತೆ ತಡೆಯಾಜ್ಞೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.