ADVERTISEMENT

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಕಾಂಗ್ರೆಸ್‌ನಿಂದ ಸಂಜಯ್ ಝಾ ಅಮಾನತು

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 21:23 IST
Last Updated 14 ಜುಲೈ 2020, 21:23 IST
ಸಂಜಯ್‌ ಝಾ
ಸಂಜಯ್‌ ಝಾ   

ಮುಂಬೈ: ಪಕ್ಷ ವಿರೋಧಿ ಚಟುವಟಿಕೆ ಹಾಗೂ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ,ಪಕ್ಷದ ಮಾಜಿ ವಕ್ತಾರ ಸಂಜಯ್‌ ಝಾ ಅವರನ್ನು ಕಾಂಗ್ರೆಸ್‌ ಮಂಗಳವಾರ ಅಮಾನತುಗೊಳಿಸಿದೆ.

ಪಕ್ಷದ ಮಹಾರಾಷ್ಟ್ರ ಘಟಕದ ಅಧ್ಯಕ್ಷರೂ ಆಗಿರುವ ಸಚಿವ ಬಾಳಾಸಾಹೇಬ್‌ ಥೋರಟ್‌ ಈ ವಿಷಯನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಉದ್ಯಮಿಯೂ ಆಗಿರುವ ಝಾ ಅವರು ಇತ್ತೀಚೆಗೆ ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳನ್ನು ಟೀಕಿಸಿ ಇಂಗ್ಲಿಷ್‌ ದಿನಪತ್ರಿಕೆಯೊಂದರಲ್ಲಿ ಲೇಖನ ಬರೆದಿದ್ದರು. ಈ ಕಾರಣಕ್ಕೆ ಅವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ತೆಗೆದು ಹಾಕಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT