ADVERTISEMENT

ನನ್ನ ಕೊಲೆ ಮಾಡಲು ‘ಮಹಾ‘ ಸಿಎಂ ಅವರಿಂದ ಸುಪಾರಿ: ಸಂಜಯ್‌ ರಾವುತ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಫೆಬ್ರುವರಿ 2023, 10:46 IST
Last Updated 22 ಫೆಬ್ರುವರಿ 2023, 10:46 IST
 ಸಂಜಯ್‌ ರಾವುತ್‌
ಸಂಜಯ್‌ ರಾವುತ್‌   

ಮುಂಬೈ: ಶಿವಸೇನೆ ನಾಯಕ ಸಂಜಯ್‌ ರಾವುತ್‌ ಅವರು ಮುಖ್ಯಮಂತ್ರಿ ಏಕನಾಥ್‌ ಶಿಂಧೆ ವಿರುದ್ಧ ಗಂಭೀರ ಆರೋಪ ಮಾಡಿದ್ದು, ನನ್ನ ಹಾಗೂ ಮಗನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಏಕನಾಥ್ ಶಿಂಧೆ ಅವರು, ತಮ್ಮ ಪುತ್ರ ಶ್ರೀಕಾಂತ್ ಶಿಂಧೆ ಮೂಲಕ ನನ್ನ ಹಾಗೂ ಮಗನನ್ನು ಕೊಲೆ ಮಾಡಿಸಲು ಸುಪಾರಿ ನೀಡಿದ್ದಾರೆ. ಹಾಗೇ ಥಾಣೆಯಲ್ಲಿ ನನ್ನ ಮಗನನ್ನು ಹತ್ಯೆ ಮಾಡಲು ರೌಡಿಗಳನ್ನು ನೇಮಿಸಿದ್ದಾರೆ. ಈ ವಿಷಯವನ್ನು ಪರಿಶೀಲಿಸುವಂತೆ ರಾವುತ್‌ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವಾರು ಪ್ರತಿನಿಧಿಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ರಾವುತ್‌ ಅವರು ಏಕೆ ನನಗೆ ಪತ್ರ ಬರೆದರು? ಭದ್ರತೆ ಪಡೆಯಲೇ? ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಸುಳ್ಳು ಹೇಳುವ ಮೂಲಕ ಸಹಾನುಭೂತಿ ಪಡೆಯಲು ಸಾಧ್ಯವಿಲ್ಲ, ಪುರಾವೆ ಇಲ್ಲದೆ ಆರೋಪ ಮಾಡುವುದು ತಪ್ಪು ಎಂದು ಫಡಣ್‌ವೀಸ್‌ ಅವರು ರಾವುತ್‌ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮಾಧ್ಯಮಗಳು ವರದಿ ಮಾಡಿವೆ.

ಏಕನಾಥ್ ಶಿಂಧೆ ಅವರ ಬಣಕ್ಕೆ ‘ಶಿವಸೇನೆ’ ಹಾಗೂ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ನೀಡಿದ ನಂತರ, ಪಕ್ಷವನ್ನು ಖರೀದಿ ಮಾಡಲು ₹2,000 ಕೋಟಿ ಒಪ್ಪಂದ ನಡೆದಿದೆ ಎಂದು ರಾವುತ್‌ ಈ ಹಿಂದೆ ಆರೋಪ ಮಾಡಿದ್ದರು.

ಈ ನಡುವೆ ಕಾಂಗ್ರೆಸ್ ಶಾಸಕ ಅಶೋಕ್ ಚವ್ಹಾಣ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ನಾಂದೇಡ್‌ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.