ADVERTISEMENT

ಸಂಜಯ್ ಸಿಂಗ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 20:01 IST
Last Updated 30 ಜುಲೈ 2019, 20:01 IST
ಸಂಜಯ್ ಸಿಂಗ್ 
ಸಂಜಯ್ ಸಿಂಗ್    

ನವದೆಹಲಿ: ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮಂಗಳವಾರ ತಮ್ಮ ಸ್ಥಾನಕ್ಕೆ ಮತ್ತು ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬುಧವಾರ ಬಿಜೆಪಿ ಸೇರುವುದಾಗಿ ಹೇಳಿರುವ ಸಂಜಯ್, ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ ಅವರ ಬೆನ್ನಿಗಿದೆ. ತಾವೂ ಮೋದಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಅಸ್ಸಾಂನಿಂದ ರಾಜ್ಯಸಭೆ ಸದಸ್ಯರಾಗಿರುವ ಸಂಜಯ್ ಅವರ ಸದಸ್ಯತ್ವದ ಅವಧಿ 2020ರ ಏಪ್ರಿಲ್‌ವರೆಗೆ ಇತ್ತು. ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್‌ ಅವರು ಸಂಜಯ್ ಸಿಂಗ್ ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್, ‘ನಾನು ಈ ಹಿಂದೆಯೂ ಬಿಜೆಪಿಯಲ್ಲಿದ್ದೆ. ಆ ಪಕ್ಷದಿಂದಲೇ ಲೋಕಸಭೆ ಚುನಾವಣೆಗೆ ಟಿಕೆಟ್ ಪಡೆದಿದ್ದೆ. ಕಾಂಗ್ರೆಸ್‌ ಇನ್ನೂ ಹಳೆಯ ಕಾಲದಲ್ಲಿದೆ. ಅದಕ್ಕೆ ಭವಿಷ್ಯದ ಬಗ್ಗೆ ಅರಿವಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.