ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಪ್ರಯತ್ನಗಳನ್ನು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸಂಸ್ಕೃತವು ಜ್ಞಾನ ಮತ್ತು ಅಭಿವ್ಯಕ್ತಿಯ ಶಾಶ್ವತ ಮೂಲವಾಗಿದ್ದು, ಅದರ ಪ್ರಭಾವವನ್ನು ಪ್ರತಿಯೊಂದು ಕ್ಷೇತ್ರದಲ್ಲೂ ಕಾಣಬಹುದು ಎಂದು ಪ್ರಧಾನಿ ಹೇಳಿದ್ದಾರೆ.
ವಿಶ್ವ ಸಂಸ್ಕೃತ ಭಾಷೆಯ ಅಂಗವಾಗಿ ಅವರು ‘ಎಕ್ಸ್’ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.
ಭಾಷೆಯನ್ನು ಕಲಿಯಲು ಮತ್ತು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿರುವ ಪ್ರತಿಯೊಬ್ಬರ ಪ್ರಯತ್ನವನ್ನು ಶ್ಲಾಘಿಸುವ ಸಂದರ್ಭ ಇದು. ಈ ದಿನವನ್ನು ವಾರ್ಷಿಕವಾಗಿ 'ಶ್ರಾವಣ ಪೂರ್ಣಿಮೆ'ಯ ಶುಭ ದಿನದಂದು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯದ ಸ್ಥಾಪನೆ, ಸಂಸ್ಕೃತ ಬೋಧನಾ ಕೇಂದ್ರ, ಭಾಷಾ ವಿದ್ವಾಂಸರಿಗೆ ಅನುದಾನ, ಪ್ರಾಚೀನ ಸಂಸ್ಕೃತ ಹಸ್ತಪ್ರತಿಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಇದು ಅಸಂಖ್ಯಾತ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಪ್ರಯೋಜನವನ್ನು ನೀಡಿದೆ ಎಂದು ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.