ಯೋಗಿ ಆದಿತ್ಯನಾಥ
ಪಿಟಿಐ ಚಿತ್ರ
ಲಖನೌ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ‘ಅಖಂಡ ಭಾರತ’ ದೃಷ್ಟಿಕೋನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಪಡಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸರ್ದಾರ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ‘ಏಕತೆಗಾಗಿ ಓಟ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸರ್ದಾರ್ ಪಟೇಲ್ ಅವರು ನಮಗೆ ನೀಡಿದ ಅಖಂಡ ಭಾರತದ ಗುರಿಯನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಬಲಪಡಿಸಲಾಗುತ್ತಿದೆ. ಈ ಸಂದರ್ಭವು ನಮ್ಮಲ್ಲಿ ಒಗ್ಗಟ್ಟು ಮೂಡಿಸಲು ಮತ್ತು ದೇಶ ಸೇವೆಗೆ ಸಮರ್ಪಿಸಿಕೊಳ್ಳಲು ನೆನಪಿಸುತ್ತದೆ' ಎಂದು ಆದಿತ್ಯನಾಥ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ನಿವಾಸದಲ್ಲಿ ಆರಂಭವಾದ ಓಟ ಕೆ.ಡಿ ಸಿಂಗ್ ಬಾಬು ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ಓಟದಲ್ಲಿ ಯುವಕರು, ಮಕ್ಕಳು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು 2014ರಿಂದ ‘ರಾಷ್ಟ್ರೀಯ ಏಕತಾ ದಿನ’ ಎಂದು ಆಚರಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.