
ಹಲ್ಲೆ
ಮುಂಬೈ: ಮಹಾರಾಷ್ಟ್ರದ ಧಾರಾಶಿವ ಜಿಲ್ಲೆಯಲ್ಲಿ ನಾಲ್ವರು ದುಷ್ಕರ್ಮಿಗಳು, ಸರಪಂಚರೊಬ್ಬರ ಎಸ್‌ಯುವಿ ಕಾರಿನ ಮೇಲೆ ದಾಳಿ ಮಾಡಿ, ಪೆಟ್ರೋಲ್ ತುಂಬಿದ ಕಾಂಡೋಮ್ ಅನ್ನು ಕಾರಿನೊಳಗೆ ಎಸೆದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೆಸಾಯಿ ಜವಳ್ಗಾದ ಸರಪಂಚ್ ನಾಮದೇವ್ ನಿಕಮ್ ಮತ್ತು ವಾಹನದಲ್ಲಿದ್ದ ಮತ್ತೊಬ್ಬರು ಗಾಯಗೊಂಡಿದ್ದಾರೆ. ತುಳಜಾಪುರದಲ್ಲಿ ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಕಮ್ ಅವರು ಕಾರಿನಲ್ಲಿ ಹೋಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದಾಳಿಕೋರರು ಕೃತ್ಯ ಎಸಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಿಕಮ್ ಅವರ ದೂರು ಆಧರಿಸಿ ತುಳಜಾಪುರ ಪೊಲೀಸರು ನಾಲ್ವರು ಅಪರಿಚಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 110ರ ಅಡಿಯಲ್ಲಿ ಹತ್ಯೆಗೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಸಂತೋಷ್ ದೇಶಮುಖ್ ಅವರನ್ನು ಅಪಹರಿಸಿ ಹತ್ಯೆಗೈದಿರುವುದಕ್ಕೆ ವಿಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ, ಗ್ರಾಮದ ಮುಖ್ಯಸ್ಥನ ಮೇಲೆ ದಾಳಿ ನಡೆದಿದೆ.
ಸಂತೋಷ್ ದೇಶ್‌ಮುಖ್ ಹತ್ಯೆಯ ಪ್ರಮುಖ ಸೂತ್ರಧಾರಿ ಸಚಿವ ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ್ ಕರಾಡ್ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.