ಅಮರಾವತಿ: ಸೌದಿ ಅರೇಬಿಯಾದಲ್ಲಿ ಮೆಕ್ಕಾ – ಮದೀನಾ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತೆಲಂಗಾಣ ಮೂಲದ 40ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಜಗನ್ ಮೋಹನ್ ರೆಡ್ಡಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪವಿತ್ರ ಉಮ್ರಾ ಯಾತ್ರೆಗೆಂದು ಸೌದಿಗೆ ತೆರಳಿದ್ದ ಭಾರತೀಯ ಯಾತ್ರಾರ್ಥಿಗಳು ಮದೀನಾ ಸಮೀಪ ಬಸ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತೆಲಂಗಾಣ ಮೂಲದ ಸಹೋದರ ಹಾಗೂ ಸಹೋದರಿಯರು ಬಸ್ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ಘಟನೆಯ ಕುರಿತು ಕೇಳಿ ಗಾಬರಿಗೊಂಡಿದ್ದೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವೈಎಸ್‌ಆರ್‌ಸಿಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.