ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಆಮ್ ಆದ್ಮಿ ಪಕ್ಷವು (ಎಎಪಿ) ಮಾಜಿ ಸಚಿವ ಸೌರಭ್ ಭಾರದ್ವಾಜ್ ಅವರನ್ನು ದೆಹಲಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಶುಕ್ರವಾರ ನೇಮಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಮೆಹರಾಜ್ ಮಲಿಕ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಘೋಷಿಸಿದೆ. ಪಂಜಾಬ್‌ನಲ್ಲಿ ಮಾತ್ರ ಅಧಿಕಾರ ಹೊಂದಿರುವ ಎಎಪಿ, ಅಲ್ಲಿ ಮನೀಷ್ ಸಿಸೋಡಿಯಾ ಅವರನ್ನು ರಾಜ್ಯ ಉಸ್ತುವಾರಿಯನ್ನಾಗಿ ನೇಮಿಸಿದೆ.
ಉಳಿದಂತೆ ಗುಜರಾತ್‌ನಲ್ಲಿ ಗೋಪಾಲ್ ರಾಯ್, ಛತ್ತೀಸಗಢಕ್ಕೆ ಸಂದೀಪ್ ಪಾಠಕ್, ಪಂಕಜ್ ಗುಪ್ತಾ ಅವರನ್ನು ಗೋವಾದಲ್ಲಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.