ADVERTISEMENT

‘ಶಬರಿಮಲೆ ಉಳಿಸಿ’ ಯಾತ್ರೆಗೆ ಯಡಿಯೂರಪ್ಪ ಚಾಲನೆ

ಏಜೆನ್ಸೀಸ್
Published 8 ನವೆಂಬರ್ 2018, 9:24 IST
Last Updated 8 ನವೆಂಬರ್ 2018, 9:24 IST
ಯಡಿಯೂರಪ್ಪ
ಯಡಿಯೂರಪ್ಪ   

ಮುತ್ತುರ್ (ಕೇರಳ):ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ಕಲ್ಪಿಸಿದ ಸುಪ್ರೀಂಕೋರ್ಟ್‌ ತೀರ್ಪು ಜಾರಿ ವಿರೋಧಿ ಬಿಜೆಪಿ ‘ಶಬರಿಮಲೆ ಉಳಿಸಿ’ ಯಾತ್ರೆಯನ್ನು ಕೈಗೊಂಡಿದೆ.

ಮುತ್ತುರಿನಿಂದ ಪ್ರಾರಂಭವಾಗುವ ಈ ಯಾತ್ರೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಪಿ.ಎಸ್‌. ಶ್ರೀಧರನ್‌ ಪಿಳ್ಳೆ ಜೊತೆಗಿದ್ದರು.

‘ಗುರುವಾರ (ನ.8) ಶುರುವಾಗಿರುವ ಈ ಯಾತ್ರೆ ನವೆಂಬರ್‌ 30ರಂದು ಶಬರಿಮಲೆಗೆ ತಲುಪುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಯಾವಾಗಲೂ ಪ್ರಾಮುಖ್ಯತೆಯನ್ನು ನೀಡಲಾಗಿದೆ ಮತ್ತು ಗೌರವದಿಂದಲೇ ನಡೆಸಿಕೊಳ್ಳಲಾಗಿದೆ. ಅಯ್ಯಪ್ಪ ದೇವಸ್ಥಾನ ವಿಚಾರ ಇಷ್ಟೊಂದು ಗಂಭೀರವಾಗಲು ಕೇರಳ ಸರ್ಕಾರದ ಈ ಪ್ರಕರಣವನ್ನು ನಿರ್ವಹಿಸುವುದರಲ್ಲಿ ವಿಫಲವಾಗಿರುವುದೇ ಕಾರಣ’ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ADVERTISEMENT

‘ಶೇ 90ರಷ್ಟು ಮಹಿಳೆಯರು ಸುಪ್ರೀಂಕೋರ್ಟ್‌ ತೀರ್ಪನ್ನು ವಿರೋಧಿಸಿದ್ದಾರೆ. ಋತುಮತಿಯಾಗುವ ವಯಸ್ಸಿನಲ್ಲಿ ಮಹಿಳೆ ದೇವಸ್ಥಾನ ಪ್ರವೇಶಿಸುವುದು ಸರಿಯಲ್ಲಾ ಎಂದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷ ಸುಪ್ರೀಂಕೋರ್ಟ್‌ ತೀರ್ಪನ್ನು ವಿರೋಧಿಸುತ್ತಿಲ್ಲ. ಆದರೆ, ದೇವರ ಬಗೆಗೆ ಜನರಿಗಿರುವ ಭಾವನೆಯನ್ನು ಗೌರವಿಸಬೇಕು. ಕೇರಳ ಸರ್ಕಾರ ಸುಪ್ರೀಂಕೋರ್ಟ್‌ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು’ ಎಂದು ಹೇಳಿದರು.

ಪ್ರತಿಭಟನೆಯ ಹಿನ್ನಲೆಯಲ್ಲಿ ಕೇರಳ ಪೊಲೀಸರು ಪಂಬ, ನಿಲಕ್ಕಲ ಮತ್ತು ಇತರೆ ಸ್ಥಳಗಳಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.