ADVERTISEMENT

ಸಾವಿತ್ರಿಬಾಯಿ ಫುಲೆ ಜಯಂತಿ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜನವರಿ 2025, 6:27 IST
Last Updated 3 ಜನವರಿ 2025, 6:27 IST
   

ಬೆಂಗಳೂರು: ಮಹಿಳಾ ಶಿಕ್ಷಣದ ಪ್ರವರ್ತಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸಾವಿತ್ರಿಬಾಯಿ ಅವರು ಮಹಿಳಾ ಸಬಲೀಕರಣದ ದಾರಿದೀಪವಾಗಿದ್ದಾರೆ. ಶಿಕ್ಷಣ ಮತ್ತು ಸಮಾಜ ಸುಧಾರಣೆ ಕ್ಷೇತ್ರದಲ್ಲಿ ಪ್ರವರ್ತಕರಾಗಿದ್ದಾರೆ. ಅವರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ. ಸಾವಿತ್ರಿಬಾಯಿ ಅವರ ಜೀವನ ನಮಗೆ ಸದಾ ಸ್ಫೂರ್ತಿದಾಯಕವಾದದ್ದು ಎಂದು ತಿಳಿಸಿದ್ದಾರೆ.

ಸಾರಾಂಶ

'ಶತಮಾನಗಳ ಕಾಲ‌ ಅವಕಾಶಗಳಿಂದ ವಂಚಿತರಾಗಿದ್ದ ಮಹಿಳೆಯರ ಸಬಲೀಕರಣಕ್ಕಾಗಿ ಶಿಕ್ಷಣದ ಹಾದಿಯನ್ನು ಆಯ್ದುಕೊಂಡು, ಸ್ವತಃ ತಾವೇ ಶಿಕ್ಷಕಿಯಾಗಿ ಇತರೆ ಮಹಿಳೆಯರಿಗೆ ಪ್ರೇರಣೆಯಾದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ನಿಸ್ವಾರ್ಥ ಸೇವೆಯನ್ನು ನೆನೆದು, ಗೌರವ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ‘ಎಕ್ಸ್‌‘ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ADVERTISEMENT

‘ದೇಶದ ಮೊದಲ ಮಹಿಳಾ ಶಿಕ್ಷಕಿ, ಮಹಿಳಾ ಹಕ್ಕುಗಳಿಗಾಗಿ ಹೋರಾಡಿದ ಸಮಾಜ ಸುಧಾರಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅನಂತ ನಮನಗಳು. ಮಹಿಳೆಯರ ಶಿಕ್ಷಣ ಮತ್ತು ಉನ್ನತಿಗಾಗಿ ಅವರು ನೀಡಿದ ಕೊಡುಗೆಗಳು ಎಂದಿಗೂ ಸ್ಮರಣೀಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ‘ಎಕ್ಸ್‌‘ನಲ್ಲಿ ತಿಳಿಸಿದ್ದಾರೆ.

‘ಭಾರತದ ಪ್ರಪ್ರಥಮ ಶಿಕ್ಷಕಿ. ಮಹಿಳೆಯರು, ದೀನ ದಲಿತರ ಶಿಕ್ಷಣಕ್ಕೆ ಜೀವನವನ್ನೇ ಮುಡಿಪಿಟ್ಟ ಮಹಾತಾಯಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಈ ದಿನದಂದು ನನ್ನ ಗೌರವಪೂರ್ವಕ ನಮನಗಳು ಎಂದು ಕೇಂದ್ರ ಸಚಿವ ಎಚ್‌,ಡಿ.ಕುಮಾರಸ್ವಾಮಿ ಅವರು ‘ಎಕ್ಸ್‌‘ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

'ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸ್ಮರಣೆಗಳು ಎಂದು ರಾಜ್ಯ ಬಿಜೆಪಿ ಘಟಕವು ಎಕ್ಸ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.