ADVERTISEMENT

ಅಧಿಕಾರಿಗಳ ನಿಯಂತ್ರಣ| ದೆಹಲಿ-ಕೇಂದ್ರ ವಿವಾದ ಇತ್ಯರ್ಥಕ್ಕೆ ಸಾಂವಿಧಾನಿಕ ಪೀಠ ರಚನೆ

ಅಧಿಕಾರಿಗಳ ಮೇಲಿನ ನಿಯಂತ್ರಣ: ಕೇಂದ್ರ– ದೆಹಲಿ ಸರ್ಕಾರದ ನಡುವಿನ ವಿವಾದ

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 10:43 IST
Last Updated 12 ಜುಲೈ 2022, 10:43 IST
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ) 
ಸುಪ್ರೀಂ ಕೋರ್ಟ್‌ (ಪಿಟಿಐ ಚಿತ್ರ)    

ನವದೆಹಲಿ (ಪಿಟಿಐ): ದೆಹಲಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವೆ ಉದ್ಭವಿಸಿರುವ ವಿವಾದ ಇತ್ಯರ್ಥಪಡಿಸಲು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸಲುಸುಪ್ರೀಂಕೋರ್ಟ್‌ ಮಂಗಳವಾರ ಸಮ್ಮತಿಸಿದೆ.

ಎಎಪಿ ಸರ್ಕಾರದ ಪರಹಿರಿಯ ವಕೀಲರಾದ ಎ.ಎಂ. ಸಿಂಘ್ವಿ ಅವರು, ಈ ವಿವಾದದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಮುಖ್ಯನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಯ್ಲಿ ಅವರಿದ್ದ ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಸಾಂವಿಧಾನಿಕ ಪೀಠ ರಚಿಸುವುದಾಗಿ ತಿಳಿಸಿದರು.

ದೆಹಲಿಯ ಅಧಿಕಾರಿಗಳ ಮೇಲಿನ ನಿಯಂತ್ರಣ ವಿವಾದದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌, ಮೇ 6ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.