ADVERTISEMENT

370ನೇ ವಿಧಿ ರದ್ದತಿ ಪ್ರಶ್ನಿಸಿ ಅರ್ಜಿ: ದಸರಾ ಬಳಿಕ ವಿಚಾರಣೆಗೆ ಸುಪ್ರೀಂ ಸಮ್ಮತಿ

ಪಿಟಿಐ
Published 23 ಸೆಪ್ಟೆಂಬರ್ 2022, 14:31 IST
Last Updated 23 ಸೆಪ್ಟೆಂಬರ್ 2022, 14:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ದಸರಾ ರಜೆಯ ಬಳಿಕ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಶುಕ್ರವಾರ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ಉದಯ್‌ ಉಮೇಶ್‌ ಲಲಿತ್‌ ಮತ್ತು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಸ್‌. ರವೀಂದ್ರ ಭಟ್‌ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್‌.ವಿ. ರಮಣ ಅವರಿದ್ದ ನ್ಯಾಯಪೀಠವು ಬೇಸಿಗೆ ರಜೆಯ ಬಳಿಕ ಅರ್ಜಿಗಳ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಆದರೆ ವಿಚಾರಣೆ ನಡೆದಿರಲಿಲ್ಲ.

ADVERTISEMENT

ಈ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ ಐವರು ನ್ಯಾಯಮೂರ್ತಿಗಳಿರುವ ನ್ಯಾಯಪೀಠವನ್ನು ಪುನರ್‌ ರಚಿಸಲಿದೆ. ಈ ಹಿಂದೆ ರಚಿಸಿದ್ದ ನ್ಯಾಯಪೀಠದಲ್ಲಿದ್ದ ಮುಖ್ಯನ್ಯಾಯಮೂರ್ತಿ ರಮಣ ಮತ್ತು ನ್ಯಾಯಮೂರ್ತಿ ಆರ್‌. ಸುಭಾಶ್‌ ರೆಡ್ಡಿ ಅವರು ನಿವೃತ್ತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.