ADVERTISEMENT

ಲಖಿಂಪುರ ಖೇರಿಗೆ ಹೋಗಲು ಕೇಂದ್ರ ಸಚಿವ ಅಜಯ್ ಪುತ್ರನಿಗೆ ಸುಪ್ರೀಂ ಕೋರ್ಟ್ ಅನುಮತಿ

​ಪ್ರಜಾವಾಣಿ ವಾರ್ತೆ
Published 8 ಮೇ 2025, 15:18 IST
Last Updated 8 ಮೇ 2025, 15:18 IST
ಸುಪ್ರೀಂ ಕೋರ್ಟ್ 
ಸುಪ್ರೀಂ ಕೋರ್ಟ್    

ನವದೆಹಲಿ: ಪ್ರತಿಭಟನಕಾರರ ಮೇಲೆ ವಾಹನ ಹತ್ತಿಸಿ ಎಂಟು ಜನರನ್ನು ಕೊಂದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಲಖಿಂಪುರ ಖೇರಿಗೆ ಭೇಟಿ ನೀಡಲು ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ. 

ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಪ್ರತಿ ಶನಿವಾರ ಲಖಿಂಪುರ ಖೇರಿಗೆ ಭೇಟಿ ನೀಡಬಹುದು. ಆದರೆ, ಭಾನುವಾರ ಸಂಜೆ ಮತ್ತೆ ಲಖನೌಗೆ ಹಿಂದಿರುಗಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ. 

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್‌ ಮತ್ತು ಎನ್‌.ಕೋಟೀಶ್ವರ ಸಿಂಗ್ ಅವರಿದ್ದ ಪೀಠವು, ಮಿಶ್ರಾ ಅವರಿಗೆ ವಿಧಿಸಲಾಗಿದ್ದ ಜಾಮೀನು ಷರತ್ತುಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿತು. 

ADVERTISEMENT

ತಮ್ಮ ಭೇಟಿ ವೇಳೆ ಮಿಶ್ರಾ ಅವರು ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಹೇಳಿದೆ. 

ಮಿಶ್ರಾ ಅವರು ನಾಲ್ಕು ವರ್ಷಗಳಿಂದ ತಮ್ಮ ಮಗಳನ್ನು ನೋಡಿಲ್ಲ. ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವರು ಕಾಯುತ್ತಿದ್ದಾರೆ. ಅವರ ಜಾಮೀನು ಷರತ್ತುಗಳನ್ನು ಸಡಿಲಿಸಿ ಎಂದು ಕೋರಿ ಮಿಶ್ರಾ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.