ADVERTISEMENT

ತೃತೀಯ ಲಿಂಗಿಗಳಿಗೆ ಉದ್ಯೋಗ: ಸೂಕ್ತ ನೀತಿ ರೂಪಿಸಲು ಸುಪ್ರೀಂ ನಿರ್ದೇಶನ

ಪಿಟಿಐ
Published 8 ಸೆಪ್ಟೆಂಬರ್ 2022, 16:15 IST
Last Updated 8 ಸೆಪ್ಟೆಂಬರ್ 2022, 16:15 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ತೃತೀಯಲಿಂಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

2014 ರಲ್ಲಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾದ ತೃತೀಯಲಿಂಗಿಯೊಬ್ಬರಿಗೆ ಅಂದಿನ ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾಉದ್ಯೋಗ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಪೀಠವು, ಕೇಂದ್ರವು ರಾಷ್ಟ್ರೀಯ ಮಂಡಳಿಯೊಂದಿಗೆ ಸಮಾಲೋಚಿಸಿ,ಉದ್ಯೋಗ ಹುಡುಕುತ್ತಿರುವ ತೃತೀಯಲಿಂಗಿಗಳಿಗೆ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸೂಕ್ತ ನೀತಿ ರೂಪಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ADVERTISEMENT

ಸೂಕ್ತ ನೀತಿ ರೂಪಿಸುವ ಮೂಲಕ ಕಾಯಿದೆಯ ನಿಬಂಧನೆಗಳನ್ನು ಅಕ್ಷರದಲ್ಲಿ ಜಾರಿಗೊಳಿಸಬೇಕು.ಈ ವಿಚಾರವಾಗಿ ಕೇಂದ್ರ ಸರ್ಕಾರ ನೇತೃತ್ವ ವಹಿಸಿ, ರಾಜ್ಯ ಸರ್ಕಾರಗಳು ಮತ್ತು ಕಾಯ್ದೆಯ ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳು ಸೇರಿದಂತೆ ಇತರೆ ಎಲ್ಲ ಘಟಕಗಳಿಗೆ ಸ್ಪಷ್ಟವಾಗಿ ಮಾರ್ಗದರ್ಶನ ನೀಡಬೇಕು ಎಂದು ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.