ADVERTISEMENT

3 ತಿಂಗಳಲ್ಲಿ RTI ಆನ್‌ಲೈನ್‌ ಪೋರ್ಟಲ್‌ ಆರಂಭಿಸಿ: ಹೈಕೋರ್ಟ್‌ಗೆ ಸುಪ್ರೀಂಕೋರ್ಟ್

ಪಿಟಿಐ
Published 20 ಮಾರ್ಚ್ 2023, 14:38 IST
Last Updated 20 ಮಾರ್ಚ್ 2023, 14:38 IST
.
.   

ನವದೆಹಲಿ: ಮೂರು ತಿಂಗಳೊಳಗೆ ಮಾಹಿತಿ ಹಕ್ಕು ಕಾಯ್ದೆಯ (ಆರ್‌ಟಿಐ) ಆನ್‌ಲೈನ್‌ ಪೋರ್ಟಲ್‌ ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಎಲ್ಲಾ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.

2005ರ ಮಾಹಿತಿ ಹಕ್ಕು ಕಾಯ್ದೆಯ ಉದ್ದೇಶವನ್ನು ಪೂರೈಸಲು ಇದರಿಂದ ಅನುಕೂಲವಾಗಲಿದೆ ಎಂದೂ ಅಭಿಪ್ರಾಯಪಟ್ಟಿದೆ.

ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಲು ಜನರಿಗೆ ಅನುಕೂಲವಾಗಲು ಸುಪ್ರೀಂ ಕೋರ್ಟ್‌ ಕೂಡ ಪೋರ್ಟಲ್‌ ಆರಂಭಿಸಲಿದೆ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಹೇಳಿದೆ.

ADVERTISEMENT

ದೆಹಲಿ, ಮಧ್ಯಪ್ರದೇಶ ಮತ್ತು ಒಡಿಶಾ ಹೈಕೋರ್ಟ್‌ಗಳು ಈಗಾಗಲೇ ವೆಬ್‌ ಪೋರ್ಟಲ್‌ಗಳನ್ನು ಆರಂಭಿಸಿವೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೂ ಒಳಗೊಂಡಿರುವ ನ್ಯಾಯಪೀಠ ತಿಳಿಸಿದೆ.

ರಾಜ್ಯ ಸರ್ಕಾರದ ವೆಬ್‌ಸೈಟ್‌ ಅನ್ನೇ ಕರ್ನಾಟಕ ಹೈಕೋರ್ಟ್‌ ಬಳಸುತ್ತಿದೆ ಎಂದೂ ವಿವರಿಸಿದೆ.

ಆರ್‌ಟಿಐ ಪೋರ್ಟಲ್‌ ಆರಂಭಿಸುವಂತೆ ಎಲ್ಲಾ ಹೈಕೋರ್ಟ್‌ಗಳ ರಿಜಿಸ್ಟ್ರಾರ್‌ ಜನರಲ್‌ಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಈ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.