ADVERTISEMENT

ನ.16ರ ಒಳಗೆ ನೀಟ್‌ ಕೌನ್ಸೆಲಿಂಗ್‌ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್‌ ಗಡುವು

ನ.16ರ ಒಳಗೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್‌ ಸೂಚನೆ

ಪಿಟಿಐ
Published 11 ನವೆಂಬರ್ 2022, 14:33 IST
Last Updated 11 ನವೆಂಬರ್ 2022, 14:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪದವಿ ಪ್ರವೇಶಕ್ಕೆ ನಡೆಸುವ ಎರಡನೇ ಸುತ್ತಿನ ನೀಟ್‌ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ನ.16ರ ಒಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಇದೇ ವೇಳೆ,ಈ ಕುರಿತ ಅಂಕಿಅಂಶಗಳನ್ನು ಅದೇ ದಿನ ವೈದ್ಯಕೀಯ ಕೌನ್ಸೆಲಿಂಗ್‌ ಸಮಿತಿಗೆ ಸಲ್ಲಿಸಬೇಕು ಎಂದು ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ‘ನೀಟ್ ಪಿ.ಜಿ ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಂಡರೆ ಕೇಂದ್ರ ಸರ್ಕಾರ ಕೊನೆಯ ಸುತ್ತಿನ ಕೌನ್ಸೆಲಿಂಗ್‌ ನಡೆಸಬಹುದು’ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.