ADVERTISEMENT

ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಅಗತ್ಯ: ಕೇಂದ್ರ ಸರ್ಕಾರ

ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಪ್ರಮಾಣ ಪತ್ರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 20:15 IST
Last Updated 27 ಅಕ್ಟೋಬರ್ 2018, 20:15 IST
   

ನವದೆಹಲಿ: ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಅನೇಕ ಕಲ್ಯಾಣ ಕಾರ್ಯಕ್ರಮ ಮತ್ತು ಕಠಿಣ ಕಾನೂನುಗಳ ಹೊರತಾಗಿಯೂ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಅವ್ಯಾಹತವಾಗಿ ಮುಂದುವರಿಯುತ್ತಿವೆ ಎಂದು ಹೇಳಿದೆ.

ಸುಪ್ರೀಂ ಕೋರ್ಟ್ ಮಾರ್ಚ್‌ 20ರಂದು ನೀಡಿರುವ ತೀರ್ಪು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಿರುವುದರಿಂದ ಸಂಬಂಧ ಪಟ್ಟ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮವನ್ನು ಸರ್ಕಾರ ಸಮರ್ಥಿಸಿಕೊಂಡಿದೆ.

ADVERTISEMENT

ಕಠಿಣ ಕಾನೂನು ತರುವ ಮೂಲಕ ದಲಿತ ಸಮುದಾಯವನ್ನು ರಕ್ಷಿಸಬೇಕಿದೆ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಸರ್ಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.