ADVERTISEMENT

ಐದು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು

ಪಿಟಿಐ
Published 17 ಮೇ 2022, 10:58 IST
Last Updated 17 ಮೇ 2022, 10:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಐವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.

ಕೊಲಿಜಿಯಂ ಸಭೆಯ ನಿರ್ಣಯನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಅವರನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸಲೂ ಶಿಫಾರಸು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಮೂರ್ತಿಗಳೆಂದರೆ: ವಿಪಿನ್ ಸಂಘಿ (ಉತ್ತರಾಖಂಡ ಹೈಕೋರ್ಟ್‌), ಅಮ್ಜದ್‌ ಎ.ಸಯೀದ್ (ಹಿಮಾಚಲ ಪ್ರದೇಶ ಹೈಕೋರ್ಟ್‌), ಎಸ್.ಎಸ್‌.ಶಿಂಧೆ (ರಾಜಸ್ಥಾನ ಹೈಕೋರ್ಟ್‌), ರಶ್ಮಿನ್‌ ಎಂ.ಛಾಯಾ (ಗುವಾಹಟಿ ಹೈಕೋರ್ಟ್‌) ಮತ್ತು ಉಜ್ಜಲ್‌ ಭುಯನ್‌ (ತೆಲಂಗಾಣ ಹೈಕೋರ್ಟ್).

ADVERTISEMENT

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಹೊರತುಪಡಿಸಿ ನ್ಯಾಯಮೂರ್ತಿಗಳಾದ ಯು.ಯು.ಲಲಿತ್‌ ಮತ್ತು ಎ.ಎಂ.ಖಾನ್ವಿಲ್ಕರ್ ಅವರು ಕೊಲಿಜಿಯಂನ ಇತರ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.