ADVERTISEMENT

23 ನ್ಯಾಯಮೂರ್ತಿಗಳ ವರ್ಗ: ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 16:10 IST
Last Updated 11 ಆಗಸ್ಟ್ 2023, 16:10 IST
   

ನವದೆಹಲಿ: ‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ತಮಗೆ ಶಿಕ್ಷೆ ವಿಧಿಸುವುದನ್ನು ತಡೆಯಲು ಕೋರಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ. ಪ್ರಚ್ಛಕ್ ಸೇರಿದಂತೆ ದೇಶದ ವಿವಿಧ ಹೈಕೋರ್ಟ್‌ಗಳ 23 ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿದೆ. 

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ನರೇಂದ್ರ ಜಿ. ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಅವರ ಕೋರಿಕೆಯಂತೆ ಅವರನ್ನು ಕರ್ನಾಟಕದ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ ಎಂದು ಕೊಲಿಜಿಯಂ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT