ADVERTISEMENT

ನ್ಯಾಯಾಧೀಶರ ವರ್ಗಾವಣೆಗೆ ‘ಸುಪ್ರೀಂ‘ ಕೊಲಿಜಿಯಂ ಶಿಫಾರಸು

ಪಿಟಿಐ
Published 13 ಮಾರ್ಚ್ 2024, 15:35 IST
Last Updated 13 ಮಾರ್ಚ್ 2024, 15:35 IST
–
   

ನವದೆಹಲಿ: ದೆಹಲಿ ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಕರ್ನಾಟಕ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳಿಗೆ ವರ್ಗಾವಣೆ ಮಾಡುವಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಬುಧವಾರ ಶಿಫಾರಸು ಮಾಡಿದೆ.

ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.

ಬೇರೆ ಯಾವುದಾದರೂ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ನ್ಯಾಯಮೂರ್ತಿ ಕಾಮೇಶ್ವರ ರಾವ್ ಮನವಿ ಮಾಡಿದ್ದರು.

ADVERTISEMENT

ದೆಹಲಿ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿ ಸಂಜೀವ್‌ ಸಚ್‌ದೇವ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆಯೂ ಕೊಲಿಜಿಯಂ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.