ADVERTISEMENT

ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿ ನ್ಯಾಯಮೂರ್ತಿ ವರಾಲೆಗೆ ಬಡ್ತಿ

ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು

ಪಿಟಿಐ
Published 30 ಸೆಪ್ಟೆಂಬರ್ 2022, 11:07 IST
Last Updated 30 ಸೆಪ್ಟೆಂಬರ್ 2022, 11:07 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ನ್ಯಾಯಮೂರ್ತಿ ಪಿ.ಬಿ.ವರಾಲೆಅವರಿಗೆ ಕರ್ನಾಟಕ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್‌ ನೇತೃತ್ವದ ಕೊಲಿಜಿಯಂ, ಕೆಲ ನ್ಯಾಯಮೂರ್ತಿಗಳಿಗೆ ಬಡ್ತಿ, ವರ್ಗಾವಣೆಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಹಾಗೂ ಸಂಜಯಕಿಶನ್‌ ಕೌಲ್‌ ಕೊಜಿಲಿಯಂ ಸದಸ್ಯರಾಗಿದ್ದಾರೆ.

ADVERTISEMENT

ಒಡಿಶಾ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಜಸ್ವಂತ್‌ ಸಿಂಗ್‌, ಜಮ್ಮು–ಕಾಶ್ಮೀರ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಅಲಿ ಮೊಹಮ್ಮದ್‌ ಮಾಗ್ರೆ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಹೈಕೋರ್ಟ್‌ಗಳ ಮುಖ್ಯನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಎಸ್‌.ಮುರಳೀಧರ (ಒಡಿಶಾ), ಪಂಕಜ್‌ ಮಿತ್ತಲ್ (ಜಮ್ಮು–ಕಾಶ್ಮೀರ) ಅವರನ್ನು ಕ್ರಮವಾಗಿ ಮದ್ರಾಸ್‌ ಹಾಗೂ ರಾಜಸ್ಥಾನ ಹೈಕೋರ್ಟ್‌ಗಳಿಗೆ ವರ್ಗಾವಣೆಗೆ ಮಾಡಲು ಸಹ ಕೊಲಿಜಿಯಂ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.