ADVERTISEMENT

ಪೀಠ ಸ್ಥಾಪನೆ ಬೇಡಿಕೆ: ವಿವರ ಬಹಿರಂಗಪಡಿಸಲು ನಿರಾಕರಿಸಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 14:01 IST
Last Updated 9 ಅಕ್ಟೋಬರ್ 2021, 14:01 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್‌ನ ಪೀಠ ಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ, ಕೈಗೊಂಡ ಕ್ರಮಗಳ ಕುರಿತ ವರದಿ ಹಾಗೂ ಈ ಸಂಬಂಧ ಬಾರ್‌ ಕೌನ್ಸಿಲ್‌ನ ಕೆಲ ಸದಸ್ಯರು ನಡೆಸಿದ್ದ ಸಭೆಯ ವಿವರಗಳನ್ನು ಬಹಿರಂಗಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

ಮಹಾರಾಷ್ಟ್ರದ ಉಲ್ಲಾಸ್‌ನಗರದ ವಕೀಲ ಅಮೃತಪಾಲ್‌ ಸಿಂಗ್‌ ಖಾಲ್ಸಾ ಎಂಬುವವರು ಈ ವಿವರಗಳನ್ನು ಕೋರಿ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.

‘ಮೂರನೇ ಪಕ್ಷಗಾರರರೊಂದಿಗಿನ ನಂಬಿಕೆಗೆ ಸಂಬಂಧಿಸಿದ ವಿಷಯ ಇದಾಗಿದೆ. ಈ ಮಾಹಿತಿಯನ್ನು ನೀಡುವುದಕ್ಕೆಪಾರದರ್ಶಕತೆ ಕಾಯ್ದೆಯಡಿ ವಿನಾಯಿತಿಯನ್ನೂ ನೀಡಲಾಗಿದೆ’ ಎಂದು ಆರ್‌ಟಿಐ ಅರ್ಜಿಗೆ ನೀಡಿರುವ ಉತ್ತರದಲ್ಲಿ ಸುಪ್ರೀಂಕೋರ್ಟ್‌ ತಿಳಿಸಿದೆ.

ADVERTISEMENT

ಬಾರ್ ಕೌನ್ಸಿಲ್‌ನ ಸದಸ್ಯರ ನಿಯೋಗವೊಂದು ಜುಲೈ 26ರಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳನ್ನು ಭೇಟಿ ಮಾಡಿ, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್‌ನ ಪೀಠ ಸ್ಥಾಪಿಸಬೇಕು ಎಂಬ ಬೇಡಿಕೆ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತ್ತು.

ಕೌನ್ಸಿಲ್‌ನ ಸದಸ್ಯರಾಗಿರುವ ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ವಕೀಲರು ಈ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.