ADVERTISEMENT

ನಟ ದಿಲೀಪ್‌ ವಿರುದ್ಧ ವಿಚಾರಣೆ: ಕಾಲಾವಕಾಶಕ್ಕೆ ‘ಸುಪ್ರೀಂ’ ನಕಾರ

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 4:20 IST
Last Updated 25 ಜನವರಿ 2022, 4:20 IST

ನವದೆಹಲಿ: ಮಲಯಾಳಂ ನಟ ದಿಲೀಪ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೇರಳ ಸರ್ಕಾರ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿತು.

ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌ ಮತ್ತು ಸಿ.ಟಿ.ರವಿಕುಮಾರ್‌ ಅವರಿದ್ದ ನ್ಯಾಯಪೀಠವು, ಇಂಥ ಕೋರಿಕೆಯನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಮಾಡಬಹುದು. ಅಗತ್ಯವಿದ್ದರೆ ವಿಸ್ತರಣೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಬಹುದು ಎಂದು ಹೇಳಿದೆ.

ಕೇರಳ ಸರ್ಕಾರವನ್ನು ಪ್ರತಿನಿಧಿಸಿದ ವಕೀಲ ಜೈದೀಪ್‌ ಗುಪ್ತಾ ಅವರು, ವಿಚಾರಣೆ ಪೂರ್ಣಗೊಳಿಸಲು ಈಗಿರುವ ಗಡುವು ಫೆಬ್ರುವರಿ 16ಕ್ಕೆ ಕೊನೆಗೊಳ್ಳಲಿದೆ. ಆದ್ದರಿಂದ ಹೆಚ್ಚುವರಿ ಆರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ನ್ಯಾಯಪೀಠವು ಮನವಿಯನ್ನು ತಿರಸ್ಕರಿಸಿ, ಕಾಲಾವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.