ADVERTISEMENT

ವೈದ್ಯರ ನೇಮಕ: ಉತ್ತರ ಪ್ರದೇಶ ಸರ್ಕಾರ, ಯುಪಿಪಿಎಸ್‌ಸಿಗೆ ಸುಪ್ರೀಂ ಕೋರ್ಟ್ ತರಾಟೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 14:06 IST
Last Updated 16 ನವೆಂಬರ್ 2022, 14:06 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಉತ್ತರ ಪ್ರದೇಶದಲ್ಲಿ ಖಾಲಿ ಇರುವ ಸಹಸ್ರಾರು ವಿಶೇಷ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಅಲ್ಲಿನ ರಾಜ್ಯ ಸರ್ಕಾರ ಮತ್ತು ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್‌ಸಿ) ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಈ ಕುರಿತು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್‌ ಕಿಶನ್‌ ಕೌಲ್‌ ಮತ್ತು ಅಭಯ್‌ ಎಸ್‌. ಓಕಾ ಅವರ ಪೀಠವು ಸರ್ಕಾರ ಮತ್ತು ಆಯೋಗದ ವಿಳಂಬ ಧೋರಣೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಉತ್ತರ ಪ್ರದೇಶ ಸರ್ಕಾರ ಮತ್ತು ಯುಪಿಪಿಎಸ್‌ಸಿ ನಡುವೆ ಸಂವಹನ ಕೊರತೆಯಿಂದ ಹುದ್ದೆಗಳ ಭರ್ತಿ ಕಾರ್ಯ ಸಾಕಷ್ಟು ವಿಳಂಬವಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಅಲ್ಲಿನ ಸರ್ಕಾರ ಮತ್ತು ಆಯೋಗ ವಿಫಲವಾದರೆ, ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವಂತೆ ಪ್ರತ್ಯೇಕ ಏಜೆನ್ಸಿಗೆ ಸೂಚಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಪೀಠ, ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 2ಕ್ಕೆ ನಿಗದಿಪಡಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.