ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆ ಪರಿಶೀಲಿಸಲು ಸುಪ್ರೀಂಕೋರ್ಟ್‌ ಸೂಚನೆ

ಪಿಟಿಐ
Published 18 ಡಿಸೆಂಬರ್ 2020, 7:20 IST
Last Updated 18 ಡಿಸೆಂಬರ್ 2020, 7:20 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಕೋವಿಡ್‌–19 ಆಸ್ಪತ್ರೆಗಳಲ್ಲಿ ಇರುವ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪರಿಶೀಲನೆ ನಡೆಸುವಂತೆ ಅದು ‌ಸೂಚಿಸಿದೆ.

ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ನೇತೃತ್ವದ ಪೀಠವು, ‘ಕೋವಿಡ್‌–19 ಆಸ್ಪತ್ರೆಗಳುನಾಲ್ಕು ವಾರಗಳೊಳಗೆ ಅಗ್ನಿಶಾಮಕ ದಳದಿಂದ ಯಾವುದೇ ಆಕ್ಷೇಪವಿಲ್ಲ ಎಂದು ಸೂಚಿಸುವ ಎನ್‌ಒಸಿಯನ್ನು ‍ಪಡೆಯಬೇಕು. ಇಲ್ಲದಿದ್ದರೆ ದಂಡನಾತ್ಮಕ ಕ್ರಮವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿತು.

ADVERTISEMENT

ಎನ್‌ಒಸಿ ಅವಧಿ ಮುಗಿದಿರುವ ಆಸ್ಪತ್ರೆಗಳು ಈ ನಾಲ್ಕು ವಾರಗಳಲ್ಲಿ ಅದನ್ನು ನವೀಕರಿಸಿಕೊಂಡು ಮಾಹಿತಿ ನೀಡಬೇಕು ಎಂದು ಪೀಠ ಹೇಳಿದೆ.

ಗುಜರಾತ್‌ನ ರಾಜ್‌ಕೋಟ್‌ನ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ರೋಗಿಗಳು ಮೃತಪಟ್ಟಿದ್ದರು. ಈ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಪೀಠವು ರಾಜ್ಯಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.