ADVERTISEMENT

ಮೊಹರಂ ಮೆರವಣಿಗೆಗೆ ಅನುಮತಿ ನೀಡಲು ಸುಪ್ರೀಂ ನಿರಾಕರಣೆ

ಏಜೆನ್ಸೀಸ್
Published 27 ಆಗಸ್ಟ್ 2020, 13:01 IST
Last Updated 27 ಆಗಸ್ಟ್ 2020, 13:01 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ:ದೇಶದೆಲ್ಲೆಡೆ ಮೊಹರಂ ಮೆರವಣಿಗೆಗೆ ಅನುಮತಿ ನೀಡುವುದಕ್ಕೆ ಗುರುವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಮೊಹರಂ ಮೆರವಣಿಗೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ತ್ರಿ ಸದಸ್ಯನ್ಯಾಯಪೀಠ ಮೆರವಣಿಗೆಗೆ ಅನುಮತಿ ನೀಡಲು ನಿರಾಕರಿಸಿತು.

ಮುಖ್ಯ ನ್ಯಾಯಮೂರ್ತಿ ಎಸ್.ಎ ಬೋಬ್ಡೆ, ನ್ಯಾ. ಸುಬ್ರಮಣಿಯನ್‌ ನ್ಯಾ. ಎ.ಎಸ್‌ ಬೋಪಣ್ಣ ಅವರಿದ್ದ ನ್ಯಾಯಪೀಠ ಮೆರವಣಿಗಗೆ ಅನುಮತಿ ನೀಡುವಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿತು. ಆದರೆ ಲಖನೌ ಮೂಲದ ಒಬ್ಬ ಅರ್ಜಿದಾರನಿಗೆ ಅಲಹಾಬಾದ್‌ ಹೈಕೋರ್ಟ್ಗೆ ಹೋಗುವಂತೆ ಸೂಚಿಸಿತು.

ADVERTISEMENT

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಡೀ ದೇಶಕ್ಕೆ ಸಾಮಾನ್ಯವಾದ ಆದೇಶವನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿತು.

ಅರ್ಜಿದಾರರು ಪುರಿಯ ರಥಯಾತ್ರೆ ಹಾಗೂ ಮುಂಬೈನಲ್ಲಿ ಮೂರು ಜೈನ ದೇವಾಲಯಗಳಲ್ಲಿ ಪ್ರಾರ್ಥನೆ ಅವಕಾಶ ಕಲ್ಪಿಸಲಾಗಿತ್ತು ಎಂಬುದನ್ನು ಉಲ್ಲೇಖಿಸಿ ಮೆರವಣಿಗೆಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

ಅರ್ಜಿದಾರರ ವಾದವನ್ನು ತಿರಸ್ಕರಿಸಿದ ನ್ಯಾಯಪೀಠ, ಪುರಿ ಮತ್ತು ಮುಂಬೈನ ಒಂದು ಸೀಮಿತ ಸ್ಥಳಗಳಲ್ಲಿ ಪ್ರಾರ್ಥನೆ, ಪೂಜೆ ನಡೆದಿದೆ. ಆದರೆ ನೀವು ಇಡೀ ದೇಶಕ್ಕೆ ಅನ್ವಯವಾಗುವಂತೆ ಅನುಮತಿ ಕೋರುತ್ತಿದ್ದಿರಾ, ನೀವು ಕೂಡ ಒಂದು ಸ್ಥಳದಲ್ಲಿ ಅನುಮತಿ ಕೋರಿದ್ದರೆ ಪುರಸ್ಕರಿಸಬಹದು ಎಂದು ನ್ಯಾಯಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.