ADVERTISEMENT

ರಾಣೆ ಬಂಗಲೆ ಧ್ವಂಸ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಪಿಟಿಐ
Published 26 ಸೆಪ್ಟೆಂಬರ್ 2022, 14:10 IST
Last Updated 26 ಸೆಪ್ಟೆಂಬರ್ 2022, 14:10 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೇಂದ್ರ ಸಚಿವ ನಾರಾಯಣ ರಾಣೆ ಒಡೆತನದ ಬಂಗಲೆಯ ಅನಧಿಕೃತ ಭಾಗ ಕೆಡವಿ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆಗೆ ಸೂಚಿಸಿ ಬಾಂಬೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ರಾಣೆ ಕುಟುಂಬದ ಒಡೆತನದಲ್ಲಿರುವ ಕಾಲ್ಕಾ ರಿಯಲ್‌ ಎಸ್ಟೇಟ್‌ ಕಂಪನಿಯು ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಎ.ಎಸ್.ಓಕಾ ಅವರಿದ್ದ ನ್ಯಾಯಪೀಠವು ಈ ಅರ್ಜಿಯನ್ನು ತಳ್ಳಿಹಾಕಿದೆ.

‘ಬಂಗಲೆ ನಿರ್ಮಾಣದ ವೇಳೆ ಫ್ಲೋರ್‌ ಸ್ಪೇಸ್‌ ಇಂಡೆಕ್ಸ್‌ (ಎಫ್‌ಎಸ್‌ಐ) ಹಾಗೂ ಕರಾವಳಿ ನಿಯಂತ್ರಣ ವಲಯ (ಸಿಆರ್‌ಜೆಡ್‌) ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಹೈಕೋರ್ಟ್‌ ಆದೇಶದಲ್ಲಿ ಉಲ್ಲೇಖಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.