ADVERTISEMENT

ಫಡಣವೀಸ್ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ಪಿಟಿಐ
Published 3 ಮಾರ್ಚ್ 2020, 19:27 IST
Last Updated 3 ಮಾರ್ಚ್ 2020, 19:27 IST
   

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

‘ಫಡಣವೀಸ್ ಅವರು 2014ರಲ್ಲಿ ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರ ಸಲ್ಲಿಸಿದಾಗ, ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವ ವಾಸ್ತವಾಂಶ ಮರೆಮಾಚಿದ್ದಕ್ಕಾಗಿ ವಿಚಾರಣೆ ಎದುರಿಸಬೇಕು’ ಎಂದು 2019ರ ಅ.1ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಈ ತೀರ್ಪು ಮರುಪರಿಶೀಲನೆಗೆ ಕೋರಿ ಫಡಣವೀಸ್ ಅರ್ಜಿ ಸಲ್ಲಿಸಿದ್ದರು.

ADVERTISEMENT

‘ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಲು ಯಾವುದೇ ಆಧಾರ ಇಲ್ಲ. ಆದ್ದರಿಂದ ಅರ್ಜಿ ವಜಾಗೊಳಿಸಲಾಗಿದೆ’ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಫೆ.18ರಂದೇ ಆದೇಶ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಮಂಗಳವಾರ ಈ ವಿಷಯ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.