ADVERTISEMENT

ಸಿಸಿಐ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ವಾಟ್ಸ್‌ಆ್ಯಪ್‌ ಖಾಸಗಿತನ ನೀತಿ ಕುರಿತು ತನಿಖೆ

ಪಿಟಿಐ
Published 14 ಅಕ್ಟೋಬರ್ 2022, 14:23 IST
Last Updated 14 ಅಕ್ಟೋಬರ್ 2022, 14:23 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ವಾಟ್ಸ್ಆ್ಯಪ್‌ನ ಖಾಸಗಿತನ ನೀತಿ– 2021 ಕುರಿತು ತನಿಖೆ ನಡೆಸುವಂತೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮೆಟಾ ಪ್ಲಾಟ್‌ಫಾರ್ಮ್ಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾಗೊಳಿಸಿತು.

ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

‘ಸಿಸಿಐ ಸ್ವತಂತ್ರ ಪ್ರಾಧಿಕಾರವಾಗಿದೆ. ಅದು ನಡೆಸುವ ಕಲಾಪಗಳು, ವಿಚಾರಣೆಗಳನ್ನು ತಡೆಯಲು ಸಾಧ್ಯವಿಲ್ಲ. ಈ ವಿಷಯದಲ್ಲಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶಿಸುವ ಅಗತ್ಯವೂ ಇಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.

ADVERTISEMENT

ಮೆಟಾ ಪ್ಲಾಟ್‌ಫಾರ್ಮ್ಸ್, ಸಾಮಾಜಿಕ ಮಾಧ್ಯಮಗಳಾದ ವಾಟ್ಸ್‌ಆ್ಯಪ್‌ ಹಾಗೂ ಫೇಸ್‌ಬುಕ್‌ನ ಮಾತೃಸಂಸ್ಥೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.