ADVERTISEMENT

ಅರ್ನಬ್‌ಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ ಕೋರ್ಟ್‌

2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ

ಪಿಟಿಐ
Published 27 ನವೆಂಬರ್ 2020, 7:10 IST
Last Updated 27 ನವೆಂಬರ್ 2020, 7:10 IST
ಅರ್ನಬ್ ಗೋಸ್ವಾಮಿ (ಸಾಂದರ್ಭಿಕ ಚಿತ್ರ)
ಅರ್ನಬ್ ಗೋಸ್ವಾಮಿ (ಸಾಂದರ್ಭಿಕ ಚಿತ್ರ)   

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತಿಳಿಸಿದೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್‌ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ.

‘ಆಡಳಿತ ನಡೆಸುವವರಿಂದ ಕ್ರಿಮಿನಲ್‌ ಕಾನೂನುಗಳು ದುರ್ಬಳಕೆ ಆಗದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಜತೆಗೆ ಕ್ರಿಮಿನಲ್ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಿ ಬಳಕೆಯಾಗಿಲ್ಲ ಎಂಬುದನ್ನು ನ್ಯಾಯಾಂಗ ಖಚಿತಪಡಿಸಿಕೊಳ್ಳಬೇಕು’ ಎಂದು ಪೀಠ ಇದೇ ವೇಳೆ ತಿಳಿಸಿದೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದರೆ ಅದು ‘ನ್ಯಾಯದ ವಿಡಂಬನೆ’ ಆಗುತ್ತದೆ ಎಂದು ಹೇಳಿ ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.