ADVERTISEMENT

ಬಾಬರಿ ಮಸೀದಿ ನೆಲಸಮ ಪ್ರಕರಣ: ವಿಚಾರಣೆಗೆ ತಿಂಗಳು ಗಡುವು ವಿಸ್ತರಣೆ

ಪಿಟಿಐ
Published 23 ಆಗಸ್ಟ್ 2020, 15:21 IST
Last Updated 23 ಆಗಸ್ಟ್ 2020, 15:21 IST
 ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್    

ನವದೆಹಲಿ: ಬಾಬರಿ ಮಸೀದಿ ನೆಲಸಮ ಪ್ರಕರಣದ ವಿಚಾರಣೆಗೆ ಲಖನೌನಲ್ಲಿರುವ ಸಿಬಿಐ ಕೋರ್ಟಿಗೆ ನಿಗದಿಪಡಿಸಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ರವರೆಗೂ ವಿಸ್ತರಿಸಿದೆ.

1992ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿ ಮತ್ತು ಇತರರು ಆರೋಪಿಗಳಾಗಿದ್ದಾರೆ. ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ನವಿನ್ ಸಿನ್ಹಾ, ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠ ಗಡುವನ್ನು ಇನ್ನು ಒಂದು ತಿಂಗಳಿಗೆ ವಿಸ್ತರಿಸಿತು.

ಸಿಬಿಐ ವಿಶೇಷ ಕೋರ್ಟಿನ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಯಾದವ್ ಅವರ ಮನವಿ ಪರಿಗಣಿಸಿದ ಪೀಠ ಆಗಸ್ಟ್ 19ರಂದು ಈ ಸಂಬಂಧ ಆದೇಶ ಹೊರಡಿಸಿತು. ಇದಕ್ಕೂ ಮೊದಲು ಆಗಸ್ಟ್ 30ರೊಳಗೆ ವಿಚಾರಣೆ ಪೂರ್ಣಗೊಳಿಸಲು ಕೋರ್ಟ್ ಸೂಚಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.