ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸತ್ಯೇಂದರ್‌ ಜೈನ್‌ ಜಾಮೀನು ಅವಧಿ ವಿಸ್ತರಣೆ

ಪಿಟಿಐ
Published 4 ಡಿಸೆಂಬರ್ 2023, 13:54 IST
Last Updated 4 ಡಿಸೆಂಬರ್ 2023, 13:54 IST
ಸತ್ಯೇಂದರ್‌ ಜೈನ್‌
ಸತ್ಯೇಂದರ್‌ ಜೈನ್‌   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್‌ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ರ ವರೆಗೆ ವಿಸ್ತರಿಸಿದೆ.

ಸರ್ವೋಚ್ಛ ನ್ಯಾಯಾಲಯವು ಜೈನ್‌ ಅವರಿಗೆ ಮೇ 26 ರಂದು ವೈದ್ಯಕೀಯ ಆಧಾರದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಆ ಬಳಿಕ ಜಾಮೀನು ಅವಧಿಯನ್ನು ವಿಸ್ತರಿಸಿತ್ತು. 

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಕಳೆದ ವರ್ಷ ಮೇ 30 ರಂದು ಜೈನ್‌ ಅವರನ್ನು ಬಂಧಿಸಿತ್ತು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.