ADVERTISEMENT

ಮಥುರಾದಲ್ಲಿ ಸಮೀಕ್ಷೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 22 ಜನವರಿ 2025, 13:07 IST
Last Updated 22 ಜನವರಿ 2025, 13:07 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಮಥುರಾದಲ್ಲಿನ ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಿಸ್ತರಿಸಿದೆ.

ಈ ಮಸೀದಿ ಸಂಕೀರ್ಣವು, ಹಿಂದೂಗಳಿಗೆ ಧಾರ್ಮಿಕವಾಗಿ ಮಹತ್ವದ್ದಾಗಿರುವ ಕೃಷ್ಣ ಜನ್ಮಭೂಮಿ ದೇವಸ್ಥಾನಕ್ಕೆ ಹೊಂದಿಕೊಂಡು ಇದೆ.

ADVERTISEMENT

ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸುವುದನ್ನು ಪ್ರಶ್ನಿಸಿ ‘ಶಾಹಿ ಮಸೀದಿ ಈದ್ಗಾ ಟ್ರಸ್ಟ್‌ ನಿರ್ವಹಣೆಯ ಸಮಿತಿ’ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಂದೂಡುತ್ತಿರುವುದಾಗಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ತ್ರಿಸದಸ್ಯ ಪೀಠವು ಹೇಳಿತು.

ಅಲಹಾಬಾದ್ ಹೈಕೋರ್ಟ್‌ 2023ರ ಡಿಸೆಂಬರ್‌ 14ರಂದು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಕಳೆದ ವರ್ಷದ ಜನವರಿ 16ರಂದು ಮೊದಲ ಬಾರಿಗೆ ತಡೆ ನೀಡಿತ್ತು. ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಹೈಕೋರ್ಟ್‌ ಅವಕಾಶ ಕಲ್ಪಿಸಿತ್ತು. ಈ ಮೇಲ್ವಿಚಾರಣೆಯ ಉಸ್ತುವಾರಿಗೆ ಕಮಿಷನರ್ ನೇಮಕ ಮಾಡಲು ಕೂಡ ಒಪ್ಪಿತ್ತು.

ಮಸೀದಿ ಸಂಕೀರ್ಣದಲ್ಲಿ ಹಿಂದೆ ದೇವಸ್ಥಾನ ಇತ್ತು ಎಂಬುದನ್ನು ಹೇಳುವ ಸೂಚಕಗಳು ಇವೆ ಎಂದು ಹಿಂದೂಗಳು ಹೇಳುತ್ತಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.