ADVERTISEMENT

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಪಿಟಿಐ
Published 9 ಮಾರ್ಚ್ 2022, 12:50 IST
Last Updated 9 ಮಾರ್ಚ್ 2022, 12:50 IST
ರಾಜೀವ್ ಗಾಂಧಿ
ರಾಜೀವ್ ಗಾಂಧಿ   

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿ ಎ.ಜಿ. ಪೇರರಿವಾಳನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಮಂದಿ ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತುಬಿ. ಆರ್. ಗವಾಯಿ ಅವರನ್ನೊಳಗೊಂಡ ಪೀಠವು, 30 ವರ್ಷಕ್ಕೂ ಹೆಚ್ಚು ಜೈಲುವಾಸ ಮತ್ತು ಪೆರೋಲ್ ಸಮಯದಲ್ಲಿ ಆರೋಪಿಯ ನಡವಳಿಕೆಯು ತೃಪ್ತಿದಾಯಕವಾಗಿದೆ ಎಂದಿದೆ.

1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಗೀಡಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.