ADVERTISEMENT

ಕಾಮಿಡಿಯನ್‌ ಮುನಾವರ್‌ಗೆ ಮಧ್ಯಂತರ ಜಾಮೀನು

ಪಿಟಿಐ
Published 5 ಫೆಬ್ರುವರಿ 2021, 7:55 IST
Last Updated 5 ಫೆಬ್ರುವರಿ 2021, 7:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕಾಮಿಡಿಯನ್‌ ಮುನಾವರ್‌ ಫಾರೂಕಿ ಅವರಿಗೆ ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಹಿಂದೂಗಳ ಭಾವನೆಗೆ ಧಕ್ಕೆ ಪಡಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪ್ರಕರಣ ದಾಖಲಾಗಿದ್ದು ಇವರನ್ನು ಬಂಧಿಸಲಾಗಿತ್ತು.

ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮುನಾವರ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಎಫ್‌. ನರೀಮನ್‌ ನೇತೃತ್ವದ ಪೀಠವು ಮಧ್ಯಪ್ರದೇಶ ಸರ್ಕಾರಕ್ಕೆ ನೋಟಿಸ್‌ ಕೂಡ ನೀಡಿತು.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಬಿ.ಆರ್‌. ಗವೈ ಅವರೂ ಪೀಠದಲ್ಲಿದ್ದರು. ಮುನಾವರ್‌ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಡಿಯನ್‌ ವಿರುದ್ಧ ಹೊರಡಿಸಿದ್ದ ವಾರಂಟ್‌ಗೂ ಪೀಠ ತಡೆಯಾಜ್ಞೆ ನೀಡಿತು.

ADVERTISEMENT

ಹೊಸ ವರ್ಷದ ದಿನ ಕಾಮಿಡಿ ಷೋನಲ್ಲಿಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಮುನಾವರ್‌ ಮತ್ತು ಇತರ ನಾಲ್ವರ ವಿರುದ್ಧ ಬಿಜೆಪಿ ಶಾಸಕರೊಬ್ಬರ ಮಗ ದೂರು ನೀಡಿದ್ದರು. ಬಳಿಕ ಇವರೆಲ್ಲರನ್ನೂ ಬಂಧಿಸಲಾಗಿತ್ತು.

ಇವರಿಗೆ ಜಾಮೀನು ನೀಡಲುಹೈಕೋರ್ಟ್‌ ಜ. 28ರಂದು ನಿರಾಕರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.