ADVERTISEMENT

ಕ್ರಿಮಿನಲ್ ಪ್ರಕರಣ: ಐವರು ಬಿಜೆಪಿ ಮುಖಂಡರಿಗೆ ಕೋರ್ಟ್‌ನಿಂದ ಮಧ್ಯಂತರ ರಕ್ಷಣೆ

ಪಿಟಿಐ
Published 18 ಡಿಸೆಂಬರ್ 2020, 11:18 IST
Last Updated 18 ಡಿಸೆಂಬರ್ 2020, 11:18 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕ್ರಿಮಿನಲ್ ಪ್ರಕರಣವೊಂದರಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಐವರು ಬಿಜೆಪಿ ಮುಖಂಡರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ರಕ್ಷಣೆ ಮಂಜೂರು ಮಾಡಿ, ಅವರ ವಿರುದ್ಧ ಬಲವಂತವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಪಶ್ಚಿಮ ಬಂಗಾಳ ಪೊಲೀಸರಿಗೆ ನಿರ್ದೇಶನ ನೀಡಿದೆ.

ಮುಕುಲ್ ರಾಯ್‌ ಮತ್ತು ಸಂಸದರಾದ ಕೈಲಾಶ್ ವಿಜಯ್‌ವರ್ಗೀಯ ಮತ್ತು ಅರ್ಜುನ್‌ ಸಿಂಗ್ ಸೇರಿದಂತೆ ಐವರು ಬಿಜೆಪಿ ಮುಖಂಡರಿಗೆ ನಾಯಾಲಯ ಮಧ್ಯಂತರ ರಕ್ಷಣೆ ಮಂಜೂರು ಮಾಡಿದೆ.

‘ರಾಜಕೀಯ ಚಟುವಟಿಕೆಗಳಿಂದ ದೂರವಿರಿಸಲು ನಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ‘ ಎಂದು ಆರೋಪಿಸಿ ಬಿಜೆಪಿ ನಾಯಕರು ಸಲ್ಲಿಸಿರುವ ಐದು ಪ್ರತ್ಯೇಕ ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ, ಈ ಕುರಿತು ಪಶ್ಚಿಮ ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ADVERTISEMENT

ಈ ಪ್ರಕರಣದ ಮುಂದಿನ ವಿಚಾರಣೆ ನಡೆಯುವವರಗೆ ಈ ಐವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ, ವಿಚಾರಣೆಯನ್ನು ಜನವರಿ ಎರಡನೇ ವಾರಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.