ADVERTISEMENT

ಪರಮ್‌ ಬೀರ್ ಸಿಂಗ್ ವಿರುದ್ಧದ ತನಿಖೆ ಸಿಬಿಐಗೆ: ‘ಸುಪ್ರೀಂ’ ಇಂಗಿತ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 16:34 IST
Last Updated 6 ಡಿಸೆಂಬರ್ 2021, 16:34 IST
.
.   

ನವದೆಹಲಿ: ಮುಂಬೈನಮಾಜಿ ಪೊಲೀಸ್ ಕಮಿಷನರ್ ಪರಮ್‌ ಬೀರ್ ಸಿಂಗ್ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಕುರಿತು ಸುಪ್ರೀಂಕೋರ್ಟ್ ಸೋಮವಾರ ಸುಳಿವು ನೀಡಿದೆ.ಸದ್ಯಕ್ಕೆ ತನಿಖೆಯನ್ನು ಮುಂದುವರೆಸುವಂತೆರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶಿಸಿದ್ದು ಪರಮ್‌ ಬೀರ್‌ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸದಂತೆ ನಿರ್ಬಂಧ ಹೇರಿದೆ.

ಮಹಾರಾಷ್ಟ್ರದ ಮಾಜಿ ಗೃಹ ಸಚಿವರ ವಿರುದ್ಧ ₹100 ಕೋಟಿ ಸುಲಿಗೆ ಆರೋಪ ಮಾಡಿದ ನಂತರ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಮ್‌ ಬೀರ್‌ ಸಿಂಗ್‌ ಹುದ್ದೆಯಿಂದ ಅಮಾನತುಗೊಂಡಿದ್ದರು.

ಈ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬಹುದು ಎಂದು ನ್ಯಾಯಾಲಯಕ್ಕೆ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.