ADVERTISEMENT

ಬ್ಯಾಂಕಿಂಗ್‌ ಹಗರಣ: ಸಿಬಿಐ, ಆರ್‌ಬಿಐಗೆ ‘ಸುಪ್ರೀಂ’ ನೋಟಿಸ್‌

ಪಿಟಿಐ
Published 17 ಅಕ್ಟೋಬರ್ 2022, 11:44 IST
Last Updated 17 ಅಕ್ಟೋಬರ್ 2022, 11:44 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ದೇಶದ ವಿವಿಧ ಬ್ಯಾಂಕ್‌ಗಳಲ್ಲಿ ನಡೆದಿರುವ ಹಗರಣಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಅಧಿಕಾರಿಗಳ ಪಾತ್ರವಿರುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಆರ್‌ಬಿಐ ಹಾಗೂ ಸಿಬಿಐಗೆ ಸೋಮವಾರ ನೋಟಿಸ್‌ ನೀಡಿದೆ.

ಬ್ಯಾಂಕ್‌ ಆಫ್‌ ಮಹಾರಾಷ್ಟ್ರ, ಯೆಸ್‌ ಬ್ಯಾಂಕ್‌ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ನಡೆದಿರುವಹಗರಣಗಳಲ್ಲಿ ಆರ್‌ಬಿಐ ಅಧಿಕಾರಿಗಳ ಪಾತ್ರವಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿಬಿಜೆಪಿ ಮುಖಂಡ ಸುಬ್ರಮಣಿಯಂ ಸ್ವಾಮಿ ಅರ್ಜಿ ಸಲ್ಲಿಸಿದ್ದರು.

‘ಅಧಿಕಾರಿಗಳು ಭಾರತೀಯ ರಿಸರ್ವ್‌ ಬ್ಯಾಂಕ್‌ ಕಾಯ್ದೆ, ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಹಾಗೂ ಭಾರತೀಯ ಸ್ಟೇಟ್‌ ಬ್ಯಾಂಕ್‌ ಕಾಯ್ದೆಗಳನ್ನು ಉಲ್ಲಂಘಿಸಿದ್ದಾರೆ’ ಎಂದೂ ಅರ್ಜಿಯಲ್ಲಿ ದೂರಿದ್ದರು.

ADVERTISEMENT

‘ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡುತ್ತೇವೆ. ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸಿಬಿಐ ಹಾಗೂ ಆರ್‌ಬಿಐಗೆ ನೋಟಿಸ್‌ ನೀಡುತ್ತಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.